Back

ⓘ ಪ್ರತಿಮಾದೇವಿ, ಕನ್ನಡ ಚಿತ್ರರಂಗ ಮತ್ತು ರಂಗಭೂಮಿ ನಟಿ. ಇವರು ೧೯೪೭ರಲ್ಲಿ ಕೃಷ್ಣಲೀಲಾ ಚಿತ್ರದ ಮೂಲಕ ಚಿತ್ರರಂಗ ಪ್ರವೇಶ ಮಾಡಿದರು. ಚಿತ್ರಮಂದಿರಗಳಲ್ಲಿ ೧೦೦ ದಿನಗಳನ್ನು ಪೂರೈಸಿದ ಮೊದಲ ಕನ್ನಡ ಚ ..



                                     

ⓘ ಪ್ರತಿಮಾದೇವಿ

ಪ್ರತಿಮಾದೇವಿ, ಕನ್ನಡ ಚಿತ್ರರಂಗ ಮತ್ತು ರಂಗಭೂಮಿ ನಟಿ. ಇವರು ೧೯೪೭ರಲ್ಲಿ ಕೃಷ್ಣಲೀಲಾ ಚಿತ್ರದ ಮೂಲಕ ಚಿತ್ರರಂಗ ಪ್ರವೇಶ ಮಾಡಿದರು. ಚಿತ್ರಮಂದಿರಗಳಲ್ಲಿ ೧೦೦ ದಿನಗಳನ್ನು ಪೂರೈಸಿದ ಮೊದಲ ಕನ್ನಡ ಚಿತ್ರ ೧೯೫೧ರಲ್ಲಿ ಬಿಡುಗಡೆಯಾದ ಜಗನ್ಮೋಹಿನಿಯಲ್ಲಿ ಅವರು ಮುಖ್ಯ ಪಾತ್ರದಲ್ಲಿ ನಟಿಸಿದರು.

                                     

1. ವೈಯಕ್ತಿಕ ಜೀವನ

ದೇವಿ ಅವರ ಹುಟ್ಟುಹೆಸರು ಮೋಹಿನಿ. ಹುಟ್ಟಿದ್ದು ಫೆಬ್ರುವರಿ ೯, ೧೯೩೨ರಲ್ಲಿ. ಪ್ರತಿಮಾದೇವಿಯವರು ಕನ್ನಡ ಚಿತ್ರರಂಗದ ನಿರ್ಮಾಪಕ-ನಿರ್ದೇಶಕ, ಮಹಾತ್ಮ ಪಿಕ್ಚರ್ಸ್ ಸಂಸ್ಥೆಯ ಸ್ಥಾಪಕರಾದ ಶಂಕರ್ ಸಿಂಗ್ ಪತ್ನಿ. ಕನ್ನಡದ ನಿರ್ಮಾಪಕ - ನಿರ್ದೇಶಕ ಎಸ್. ವಿ. ರಾಜೇಂದ್ರಸಿಂಗ್, ನಟಿ ನಿರ್ಮಾಪಕಿ – ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಪ್ರತಿಮಾದೇವಿ ಅವರ ಮಕ್ಕಳು.

                                     

2. ಹಲವಾರು ಚಿತ್ರಗಳಲ್ಲಿ

ಕೃಷ್ಣಲೀಲಾ, ನಾಗಕನ್ಯೆ, ಜಗನ್ಮೋಹಿನಿ, ಶ್ರೀನಿವಾಸ ಕಲ್ಯಾಣ, ಮುಟ್ಟಿದ್ದೆಲ್ಲಾ ಚೀನಾ, ಚಂಚಲಕುಮಾರಿ, ಧರ್ಮಸ್ಥಳ ಮಹಾತ್ಮೆ, ಪ್ರಭುಲಿಂಗ ಲೀಲೆಮಂಗಳ ಸೂತ್ರ, ಧರಣಿ ಮಂಡಲ ಮಧ್ಯದೊಳಗೆ, ರಾಮಾ ಶಾಮಾ ಭಾಮಾ ಮುಂತಾದ ಸುಮಾರು ಅರವತ್ತೈದು ಚಿತ್ರಗಳಲ್ಲಿ ಪ್ರತಿಮಾದೆವಿಯವರು ನಟಿಸಿದ್ದಾರೆ. ಜಗನ್ಮೋಹಿನಿ, ವರದಕ್ಷಿಣೆ, ಧರ್ಮಸ್ಥಳ ಮಹಾತ್ಮೆಯಲ್ಲಿನ ಅಭಿನಯಕ್ಕೆ ಪ್ರತಿಮಾದೇವಿಯವರು ಪ್ರಸಿದ್ಧಿ ಗಳಿಸಿದ್ದರು.

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →